ಉಪ್ಪಿನಂಗಡಿ : ಯಾರ ಮಾತೂ ಲೆಕ್ಕಿಸದೆ ಹಿಜಾಬ್ ಧರಿಸಿ ಕ್ಲಾಸ್ ಗೆ ಬಂದ ವಿದ್ಯಾರ್ಥಿನಿ | ಅಮಾನತು ಆದೇಶ ಹೊರಡಿಸಿದ ಪ್ರಾಂಶುಪಾಲರು
ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಅಮಾನತು ಗೊಳಿಸಲಾಗಿದೆ.
ಶುಕ್ರವಾರ ತರಗತಿಯಲ್ಲಿ ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ವಾರದ ಮಟ್ಟಿಗೆ ಅಮಾನತುಗೊಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಸ್ಪಷ್ಟ ನಿರ್ಧಾರ ಮಾಡಲಾಗಿದೆ. ಕಾಲೇಜು ಆವರಣದಲ್ಲಿ ಕಾಲೇಜು ಸಮವಸ್ತ್ರಕ್ಕೆ ಹೊರತಾದ ಬಟ್ಟೆ ತೊಡುವಂತಿಲ್ಲ. ಈ ನಿಯಮವನ್ನು ಉಲ್ಲಂಘಿಸುವ ವಿದ್ಯಾರ್ಥಿಗಳನ್ನು ತತ್ಕ್ಷಣ ಅಮಾನತುಗೊಳಿಸಬೇಕು. ಬಳಿಕ ಮುಚ್ಚಳಿಕೆ ಬರೆಸಿಕೊಂಡು ಕಲಿಕೆಗೆ ಅವಕಾಶ ಕಲ್ಪಿಸಬೇಕು. ಮುಚ್ಚಳಿಕೆಯ ಹೊರತಾಗಿಯೂ ನಿಯಮ ಉಲ್ಲಂಘಿಸುವ ಕೃತ್ಯವೆಸಗಿದರೆ ನಿರ್ದಾಕ್ಷಿಣ್ಯವಾಗಿ ಕಾಲೇಜಿನಿಂದ ಡಿಬಾರ್ ಮಾಡಬೇಕೆಂದು ನಿರ್ಣಯ ಕೈಗೊಂಡು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಯಿತು.