ಪ್ರವಾದಿ ಮುಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ, ಬಿಜೆಪಿಯಿಂದ ನೂಪುರ್ ಶರ್ಮಾ ಅಮಾನತು!!!
ನವದೆಹಲಿ: ಟಿవి ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಭಾನುವಾರ ಅಮಾನತುಗೊಳಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಾಮಾಜಿಕ ಮಾಧ್ಯಮದಲ್ಲಿ ಅವರು ಹೇಳಿದ ಅಭಿಪ್ರಾಯಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತವೆ ಪಕ್ಷದ ಮೂಲಭೂತ ನಂಬಿಕೆಗಳನ್ನು ಉಲ್ಲಂಘಿಸುತ್ತದೆ ಎಂದು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.
“ಯಾವುದೇ ಧಾರ್ಮಿಕ ವ್ಯಕ್ತಿಗಳ ಅವಮಾನವನ್ನು ಬಲವಾಗಿ ಖಂಡಿಸುತ್ತದೆ” ಎಂದು ಹೇಳಿದ ನಂತರ ಬಿಜೆಪಿ ನೂಪುರ್ ಶರ್ಮಾ ಅವರನ್ನು ರಾಷ್ಟ್ರೀಯ ವಕ್ತಾರೆ ಹುದ್ದೆಯಿಂದ ಮತ್ತು ಪಕ್ಷದ ಪ್ರಾಥಮಿತ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
ಅಮಾನತಿನ ಬಳಿಕ, ತನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ನೂಪುರ್ ಹೇಳಿದ್ದಾರೆ.
ಹೇಳಿದ್ದೇನು ಅವರು.?
ಪ್ರಸ್ತುತ ನಡೆಯುತ್ತಿರುವ ಜ್ಞಾನ್ವಾಪಿ ವಿವಾದದ ಬಗ್ಗೆ ಟಿವಿ ಚರ್ಚೆಯಲ್ಲಿ, ನೂಪುರ್ ಶರ್ಮಾ ಅವರು ಇಸ್ಲಾಮಿಕ್ ಧಾರ್ಮಿಕ ಪುಸ್ತಕಗಳಿಂದ ಕೆಲವು ವಿಷಯಗಳನ್ನು ಜನರು ಅಣಕಿಸಬಹುದು ಎಂದು ಹೇಳಿದ್ದಾರೆ ಎಂದು ನಂಬಲಾಗಿದೆ. ಮುಸ್ಲಿಮರು ಹಿಂದೂ ಧರ್ಮವನ್ನು ಅಣಕಿಸುತ್ತಿದ್ದಾರೆ ಮತ್ತು ಮಸೀದಿ ಸಂಕೀರ್ಣದೊಳಗೆ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ವನ್ನು ಕಾರಂಜಿ ಎಂದು ಕರೆಯುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಹೈದರಾಬಾದ್, ಪುಣೆ ಮತ್ತು ಮುಂಬೈನಲ್ಲಿ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ನೂಪುರ್ ಶರ್ಮಾ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.