ಸಾವಿರಾರು ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ CET ಎಕ್ಸಾಮ್ ಹಾಲ್ ಟಿಕೆಟ್ !! | ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬೇಜವಾಬ್ದಾರಿಯ ನಡೆಗೆ ಪೋಷಕರಿಂದ ವ್ಯಾಪಕ ಆಕ್ರೋಶ

ಪ್ರತಿ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವಿದ್ಯಾರ್ಥಿಗಳಿಗೆ ಒಂದಲ್ಲಾ ಒಂದು ರೀತಿಯಲ್ಲಿ ತೊಂದರೆ ಕೊಡ್ತಾನೆ ಬಂದಿದೆ. ಅಂತೆಯೇ ಈ ಬಾರಿ ಸಿಇಟಿ ಪರೀಕ್ಷಾ ಶುಲ್ಕ ಪಾವತಿ ಮಾಡಿದ್ರೂ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್ ಲೋಡ್ ಆಗುತ್ತಿಲ್ಲ. ಪರೀಕ್ಷೆ ಸಮಯಕ್ಕೆ ಸರಿಯಾಗಿ ಹಾಲ್ ಟಿಕೆಟ್ ಸಿಗುತ್ತೋ.. ಸಿಗಲ್ವೋ ಎಂಬ ಆತಂಕದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮುಳುಗಿದ್ದಾರೆ.

ಈ ಬಾರಿಯ ಸಿಇಟಿ ಪರೀಕ್ಷೆಗೆ ಇನ್ನು ಕೇವಲ 9 ದಿನ ಮಾತ್ರ ಬಾಕಿ ಉಳಿದಿದೆ. ಸಿಇಟಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ಸಿಇಟಿ ಪರೀಕ್ಷೆ ಸಿಗೋದಿಲ್ಲ ಎಂಬ ಆತಂಕಕ್ಕೆ ಒಳಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ ಪ್ರಾಧಿಕಾರ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹಾಲ್ ಟಿಕೆಟ್ ಸಮಸ್ಯೆ ಒಂದಲ್ಲ, ಎರಡಲ್ಲ ಬರೋಬ್ಬರಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎದುರಾಗಿದೆ. ಎಲ್ಲಾ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಆದ್ರೆ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಿಇಟಿ ವೆಬ್ ಸೈಟ್ ಸರ್ವರ್ ಸ್ಲೋ ಇರೋ ಕಾರಣ ವಿದ್ಯಾರ್ಥಿಗಳಿಗೆ ಈ ಆತಂಕ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸಾವಿರಾರು ವಿದ್ಯಾರ್ಥಿಗಳು ಕೆಇಎಗೆ ಈಗಾಗಲೇ ದೂರು ಸಲ್ಲಿಸಿದ್ದಾರೆ. ಆದರೆ ವಿದ್ಯಾರ್ಥಿಗಳ ದೂರಿಗೆ ಕೆಇಎ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಇನ್ನು ಈ ರೀತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೆಇಎ ವಿರುದ್ಧ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ.

Leave A Reply

Your email address will not be published.