“ಪಿಯುಸಿ ಪಠ್ಯ ಪರಿಷ್ಕರಣೆ” ಸಮಿತಿಯಿಂದ ರೋಹಿತ್ ಚಕ್ರತೀರ್ಥ ಔಟ್ !!!

Share the Article

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ.

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಡಲಾಗಿದೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ. ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಪಠ್ಯ ಪರಿಷ್ಕರಣೆಗೆ ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿದ್ದರಿಂದ, ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Leave A Reply