ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗೆ ಸಾರ್ವಜನಿಕವಾಗಿ ಕೊಲೆ ಬೆದರಿಕೆ
ತಮಿಳುನಾಡು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಿಎಂಕೆ ಪಕ್ಷವು ಹಿಂದೂ ವಿರೋಧಿ ಚಟುವಟಿಕೆ ನಡೆಸುತ್ತಿದ್ದೂ, ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ಮಾಡಿದ್ದ ಆರೋಪದ ಬೆನ್ನಲ್ಲೇ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ,ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರಿಗೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಚಿವರೊಬ್ಬರು ಬೆದರಿಕೆ ಹಾಕಿರುವ ಗಂಭೀರ ಆರೋಪವೊಂದು ಕೇಳಿಬಂದಿದೆ.
ಡಿ.ಎಂ.ಕೆ ಪಕ್ಷದ ಸಚಿವ ಟಿಎಂ ಅನ್ಬರಸನ್ ಅವರು ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ನಾರಾಯಣ್ ತಿರುಪತಿ ಆರೋಪಿಸಿದ್ದು, ಮುಖ್ಯ ಮಂತ್ರಿಯ ಮಧ್ಯಪ್ರವೇಶಕ್ಕೆ ಆಗ್ರಹವಾಗಿದೆ.
ಅಣ್ಣಾಮಲೈ ಇನ್ನು ಮುಂದಕ್ಕೆ ಡಿ.ಎಂ.ಕೆ ಪಕ್ಷದ ಬಗ್ಗೆ ಮಾತನಾಡಿದರೆ ನಿನ್ನನ್ನು ಮುಗಿಸುತ್ತೇವೆ ಎಂದು ಹೇಳಿದಲ್ಲದೇ, ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ವರಿಷ್ಠರ ಬಗ್ಗೆ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂದು ದೂರಲಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿಯ ಹೇಳಿಕೆ ನೀಡಿದ ಸಚಿವರನ್ನು ಸ್ಥಾನದಿಂದ ಉಚ್ಛಾಟಿಸಿ ಕ್ರಮ ಕೈಗೊಳ್ಳಬೇಕೆನ್ನುವ ಕೂಗು ಕೇಳಿಬಂದಿದೆ.