ಮಂಕಿಪಾಕ್ಸ್ ಆತಂಕ ರಾಜ್ಯಾದ್ಯಂತ ಈ ನಿಯಮ ಜಾರಿಗೆ ತಂದ ಆರೋಗ್ಯ ಸಚಿವ

 

ವಿಶ್ವದಾದ್ಯಂತ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಮಂಗಳವಾರ ಹೇಳಿದ್ದಾರೆ.

ಜಗತ್ತಿನ ವಿವಿಧೆಡೆ ಹರಡುತ್ತಿರುವ ಮಂಕಿಪಾಕ್ಸ್ ತಡೆಗೆ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ ತಿಳಿಸಿದ್ದಾರೆ.

ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

Leave A Reply

Your email address will not be published.