ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ನಾಯಕಿ ” ಮಿಥಾಲಿ ರಾಜ್” !

ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಮಹಿಳಾ ಕ್ರಿಕಟ್‌ನ ಪ್ರತಿಭೆ ಮತ್ತು ಭಾರತದಲ್ಲಿ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಿರುವ ಮಿಥಾಲಿ ರಾಜ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಭಾರತ ಮಹಿಳಾ ಕ್ರಿಕೆಟ್ ತಂಡದ ಪರ ತಮ್ಮದೇ ಛಾಪು ಮೂಡಿಸಿದ್ದ 39 ವರ್ಷದ ಮಿಥಾಲಿ ರಾಜ್, ಬುಧವಾರವಾದ ಇಂದು ದಿಢೀರ್ ಎನ್ನುವಂತೆ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

‘ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ’ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

ಭಾರತ ಮಹಿಳಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ತಂಡದ ಕನಾಯಕಿಯಾಗಿದ್ದ ಮಿಥಾಲಿ ರಾಜ್, 2002ರಲ್ಲಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ದಶಕಗಳ ಕಾಲ ಕ್ರಿಕೆಟ್ ಆಡುವ ಮೂಲಕ ಕೋಟ್ಯಾಂತರ ಮಹಿಳೆಯರ ಪಾಲಿಗೆ ಮಿಥಾಲಿ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ಭಾರತ ಮಹಿಳಾ ತಂಡದ ನಾಯಕಿಯಾಗಿ ಮಿಥಾಲಿ ರಾಜ್ ಎರಡು ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಫೈನಲ್‌ಗೇರಿಸಿದ್ದರು.

Leave A Reply

Your email address will not be published.