ಇಂದಿನಿಂದ ಪಿಯು ಕಾಲೇಜುಗಳು ಆರಂಭ | ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಲವು ಮಾರ್ಗಸೂಚಿಗಳು | ಪದವಿ ಶಿಕ್ಷಣ ಇಲಾಖೆಯಿಂದ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಪ್ರಥಮ ಹಾಗು ದ್ವಿತೀಯ ಪಿಯುಸಿ ಕಾಲೇಜುಗಳು ಆರಂಭವಾಗಿಲಿವೆ. ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣದಿಂದ ಯಾವುದೇ ಶಾಲಾ ಕಾಲೇಜಿನ ತರಗತಿಗಳು ನಡೆದಿಲ್ಲ. ಆದರೆ ಕೊರೊನಾ ಕಡಿಮೆಯಾದ ಕಾರಣ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಈ ಬಾರಿ ದಾಖಲೆ ಪ್ರಮಾಣದಲ್ಲಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹೀಗಾಗಿ ಪದವಿ ಪೂರ್ವ ಕಾಲೇಜುಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಪ್ರಸಕ್ತ ಸಾಲಿನಲ್ಲಿ ನಿಗದಿತ ಸಮಯಕ್ಕೆ ತರಗತಿಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಹಾಗೆಯೇ ಕೆಲವು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡು ತರಗತಿಗಳನ್ನು ಆರಂಭಸಿಲು ನಿರ್ಧರಿಸಿದೆ ಎನ್ನಲಾಗಿದೆ.

ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಮೊದಲ ಅವಧಿ ಜೂನ್ 9 ರಿಂದ ಸೆಪ್ಟೆಂಬರ್ 30ರ ವರೆಗೆ ನಡೆಯಲಿದೆ. ಎರಡನೇ ಅವಧಿ ಅಕ್ಟೋಬರ್ 13 ರಿಂದ 2023ರ ಮಾರ್ಚ್ 31ರವರೆಗೆ ನಿಗದಿಪಡಿಸಲಾಗಿದೆ. ಅಕ್ಟೋಬರ್ 1 ರಿಂದ 12 ರವರೆಗೆ ಮಧ್ಯಂತರ ರಜೆ ಇರಲಿದೆ. ಎಪ್ರಿಲ್ 1 ರಿಂದ ಬೇಸಿಗೆ ರಜೆ ಆರಂಭವಾಗಲಿದೆ.

ಇನ್ನೂ ಎಸ್‌ಎಸ್‌ಎಲ್‌ಸಿ ನಂತರ ಪಿಯು ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಹಿಜಾಬ್ ವಿವಾದದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪಿನ ಅನ್ವಯ ಸಮವಸ್ತ್ರಗಳನ್ನು ಧರಿಸುವಂತೆ ಸೂಚಿಸಿ, ಪದವಿ ಪೂರ್ಣ ಶಿಕ್ಷಣ ಇಲಾಖೆಯು 2022-23ನೇ ಶೈಕ್ಷಣಿಕೆ ವರ್ಷದ ದಾಖಲಾತಿ ಮಾರ್ಗಸೂಚಿ ಪ್ರಕಟಿಸಿತ್ತು.

Leave A Reply

Your email address will not be published.