AAI : ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ (ಎಎಐ) ದಲ್ಲಿ 400 ವಿವಿಧ ಹುದ್ದೆ |  ಪದವೀಧರರಿಗೆ ಆದ್ಯತೆ

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ (ಎಎಐ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರ್ಯಾಫಿಕ್ ಕಂಟ್ರೋಲ್) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಜುಲೈ 14, 2022 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಬಹುದು. ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಕಂಪ್ಲಿಟ್ ಡೀಟೇಲ್ಸ್ ಈ ಕೆಳಗಿನಂತಿದೆ.

ಉದ್ಯೋಗ ಸಂಸ್ಥೆ /ಪ್ರಾಧಿಕಾರ : ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾ

ಹುದ್ದೆ ಹೆಸರು : ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರ್ಯಾಫಿಕ್ ಕಂಟ್ರೋಲ್)

ಹುದ್ದೆಗಳ ಸಂಖ್ಯೆ: 400

ವಿದ್ಯಾರ್ಹತೆ : ಪದವಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ಓದಿರಬೇಕು ಅಥವಾ ಇಂಜಿನಿಯರಿಂಗ್ ಪದವಿಯನ್ನು
ಪಾಸ್ ಮಾಡಿರಬೇಕು.

ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 15-06-2022
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-07-2022

ಆನ್‌ಲೈನ್ ಪರೀಕ್ಷೆ ದಿನಾಂಕ: ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

ವಯೋಮಿತಿ : ಅರ್ಜಿ ಸಲ್ಲಿಸಲು ಗರಿಷ್ಠ 27 ವರ್ಷ ವಯಸ್ಸು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ
ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
ವಯೋಮಿತಿ ಸಡಿಲಿಕೆ ಇರಲಿದೆ.

ಅಪ್ಲಿಕೇಶನ್ ಸಲ್ಲಿಸುವುದು ಹೇಗೆ?

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಫೀಶಿಯಲ್ ವೆಬ್‌ಸೈಟ್

https://www.aai.aero/ ಗೆ ಭೇಟಿ ನೀಡಬೇಕು. ದಿನಾಂಕ 15-06-2022 ರಂದು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ ಮಾಡಲಾಗುತ್ತದೆ. ಈ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.

ಅಪ್ಲಿಕೇಶನ್ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-
ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ ರೂ.81. PWD ಅಭ್ಯರ್ಥಿಗಳಿಗೆ ಶುಲಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು : ಶೈಕ್ಷಣಿಕ ದಾಖಲೆಗಳು ಆಧಾರ್ ಕಾರ್ಡ್ , ಜಾತಿ ಪ್ರಮಾಣ ಪತ್ರ,
ಜನ್ಮ ದಿನಾಂಕ ಪ್ರಮಾಣ ಪತ್ರ.

ನೇಮಕ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

ವೇತನ: ಎಎಐ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಮಾಸಿಕ ಆರಂಭಿಕ ವೇತನ ರೂ.40,000 ನೀಡಲಾಗುತ್ತದೆ.

ಏರ್‌ಪೋರ್ಟ್‌ ಅಥಾರಿಟಿ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ವಿಳಾಸ : https://www.aai.aero/

Leave A Reply

Your email address will not be published.