ಕಂಪ್ಯೂಟರ್ ಪರೀಕ್ಷೆ ಉತ್ತೀರ್ಣರಾಗದ ಸರ್ಕಾರಿ ನೌಕರರಿಗಿಲ್ಲ ವಾರ್ಷಿಕ ವೇತನ ಬಡ್ತಿ!

ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯವಾಗಿ ಉತ್ತೀರ್ಣರಾಗಬೇಕು, ಇಲ್ಲವಾದಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳದಿರುವ ಬಗ್ಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಪರೀಕ್ಷೆ ತೆಗೆದುಕೊಳ್ಳದ ಅಧಿಕಾರಿಗಳು ಮತ್ತು ನೌಕರರ ಮಾಹಿತಿ ಕಲೆಹಾಕಿ ಸರ್ಕಾರಕ್ಕೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಸುಮಾರು 5.40 ಲಕ್ಷ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸರ್ಕಾರ ಆದೇಶ ನೀಡಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಅಧಿಕಾರಿಗಳು ಮತ್ತು ನೌಕರರು ಬರೆದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ 1,73,500 ಅಧಿಕಾರಿಗಳು, ನೌಕರರು ಉತ್ತೀರ್ಣರಾಗಿದ್ದಾರೆ.

ಇನ್ನೂ ಸುಮಾರು 3.5 ಲಕ್ಷ ಸರ್ಕಾರಿ ನೌಕರರು ಪರೀಕ್ಷೆ ತೆಗೆದುಕೊಳ್ಳಬೇಕಾಗಿದ್ದು, ಸರ್ಕಾರಿ ಅಧಿಕಾರಿಗಳು, ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮಾಡಿಕೊಳ್ಳಲು ಡಿಸೆಂಬರ್ 31 ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯೊಳಗೆ ಉತ್ತೀರ್ಣರಾಗದ ನೌಕರರು ಮತ್ತು ಅಧಿಕಾರಿಗಳು ಮುಂಬಡ್ತಿ, ವಾರ್ಷಿಕ ವೇತನ ಬಡ್ತಿಗೆ ಅರ್ಹರಾಗಿರುವುದಿಲ್ಲ ಎಂದು ಹೇಳಲಾಗಿದೆ.

Leave A Reply

Your email address will not be published.