SSLC ನಂತರ ವಿದ್ಯಾಭ್ಯಾಸಕ್ಕೆ “ಸಾಲ” ಬೇಕಾ? ಹೆಚ್ಚಿನ ಮಾಹಿತಿ ಇಲ್ಲಿದೆ!

ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮುಗಿದಿದೆ. ಫಲಿತಾಂಶ ಕೂಡಾ ಬಂದು, ವಿದ್ಯಾರ್ಥಿಗಳು ಮುಂದಿನ ಕೋರ್ಸ್‌ಗಳ ಆಯ್ಕೆಯ ಬಗ್ಗೆ ಆಲೋಚನೆಯಲ್ಲಿ ಇದ್ದಾರೆ. ಹಲವಾರು ವಿದ್ಯಾರ್ಥಿಗಳು ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ, ಮುಂದಿನ ಕೋರ್ಸ್‌ಗಳ ವಿದ್ಯಾಭ್ಯಾಸಕ್ಕೆ ಹಣದ ತೊಂದರೆಯಿಂದಾಗಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುತ್ತಾರೆ.

ವಿದ್ಯಾರ್ಥಿಗಳ ಈ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಸರಕಾರ ವಿದ್ಯಾರ್ಥಿಗಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಶೈಕ್ಷಣಿಕ ಸಾಲ ಮತ್ತು ಸ್ಕಾಲರ್‌ಶಿಪ್‌ನ್ನು ನೀಡುತ್ತಿವೆ. ಶೈಕ್ಷಣಿಕ ಸಾಲ ಮತ್ತು ಸ್ಕಾಲರ್‌ಶಿಪ್ ಪಡೆಯುವ ಬಗ್ಗೆ ಇಲ್ಲಿ ಹೆಚ್ಚಿನ ಮಾಹಿತಿಯನ್ನ ನೀಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಸಾಲ ಮತ್ತು ಸ್ಕಾಲರ್‌ಶಿಪ್

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2009ರಲ್ಲಿ ಕೇಂದ್ರ ವಲಯ ಸಬ್ಸಿಡಿ ಯೋಜನೆಯನ್ನು ಜಾರಿಗೆ ತಂದಿದೆ. ಇನ್ನೂ ಇತ್ತ ಕರ್ನಾಟಕದಲ್ಲೂ ಕೂಡಾ ಹಲವು ಸರ್ಕಾರಿ ಇಲಾಖೆಗಳು, ಮಂಡಳಿಗಳು, ಕಾರ್ಪೋರೇಶನ್‌ಗಳು ಸಹ ಶೈಕ್ಷಣಿಕ ಸಾಲ ಮತ್ತು ವಿದ್ಯಾರ್ಥಿ ವೇತನಗಳನ್ನು ನೀಡುತ್ತಿವೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ವೃತ್ತಿಪರ ಟೆಕ್ನಿಕಲ್ ಕೋರ್ಸ್‌ಗಳಿಗೆ ಮತ್ತು ಇತರೆ ಕೋರ್ಸ್‌ಗಳಿಗೆ ಅಂಗೀಕೃತ ವಿವಿಗಳಲ್ಲಿ ಮತ್ತು ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಲು ಸಾಲ ನೀಡುತ್ತದೆ. ವಿದ್ಯಾರ್ಥಿ ಸಾಲ ಮತ್ತು ಸ್ಕಾಲರ್‌ಶಿಪ್‌ಗೆ ಎಂಹೆಚ್‌ಆರ್‌ಡಿ ಮುಖ್ಯ ಮೂಲವಾಗಿದೆ.

ಎಂಹೆಚ್‌ಆರ್‌ಡಿ ಕಡೆಯಿಂದ ಕೋರ್ಸ್ ಅವಧಿ ಮತ್ತು ಹೆಚ್ಚುವರಿ ಒಂದು ವರ್ಷದ ಅವಧಿಗೆ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ. ಕೆಲವು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾತ್ರ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ. ಶೈಕ್ಷಣಿಕ ಸಾಲವು ವಾರ್ಷಿಕ ಆದಾಯ 5 ಲಕ್ಷಕ್ಕಿಂತ ಕಡಿಮೆ ಇರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ವಿದ್ಯಾಲಕ್ಷ್ಮಿ ಪೋರ್ಟಲ್ : ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾಲಕ್ಷ್ಮಿ ಪೋರ್ಟ್‌ಲ್ ಅನ್ನು ಲಾಂಚ್ ಮಾಡಿದೆ. ಇದು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ವೆಬ್‌ಸೈಟ್ ಮೂಲಕ ಯಾವುದೇ ವಿದ್ಯಾರ್ಥಿಯೂ ಎಜುಕೇಶನ್ ಲೋನ್ ಪಡೆಯಲು ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

ಕರ್ನಾಟಕದಲ್ಲೂ ನೀಡಲಾಗುತ್ತದೆ ಶೈಕ್ಷಣಿಕ ಸಾಲ ಮತ್ತು ಸ್ಕಾಲರ್‌ಶಿಪ್

ಎಂಹೆಚ್‌ಆರ್‌ಡಿ ಲೋನ್ ಹೊರತುಪಡಿಸಿ, ಕರ್ನಾಟಕದಲ್ಲಿ ಬಿಬಿಎಂಪಿ, ನಗರ ಸ್ಥಳೀಯ ಸಂಸ್ಥೆಗಳು, ಮಂಡಳಿಗಳು ಮತ್ತು ಕಾರ್ಪೋರೇಶನ್‌ಗಳು ಮತ್ತು ಸರ್ಕಾರಿ ಇಲಾಖೆಗಳು ಲೋನ್ ವಿತರಣೆಯಲ್ಲಿ ತೊಡಗಿಕೊಂಡಿವೆ.

ಅರಿವು ಶೈಕ್ಷಣಿಕ ಸಾಲ ಯೋಜನೆ : ಹಿಂದುಳಿದ ವರ್ಗಗಳ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕಾಭಿವೃದ್ಧಿಗಾಗಿ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ಅರಿವು ಶೈಕ್ಷಣಿಕ ಸಾಲ ಯೋಜನೆ ಅನುಷ್ಠಾನಗೊಳಿಸಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗರಿಷ್ಠ ರೂ.5 ಲಕ್ಷದವರೆಗೆ ಶೈಕ್ಷಣಿಕ ಸಾಲ ಸೌಲಭ್ಯ ದೊರೆಯಲಿದೆ.

ವಿದೇಶಗಳಲ್ಲಿ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಮತ್ತು ಸ್ಕಾಲರ್‌ಶಿಪ್

ನಗರ ಸ್ಥಳೀಯ ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ಪೈಕಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದೇಶಗಳಲ್ಲಿ ವ್ಯಾಸಂಗ ಮಾಡಲು ಶೈಕ್ಷಣಿಕ ಸಾಲ ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಸರಕಾರದ ಅಧಿಕೃತ ವೆಬ್‌ಸೈಟ್‌ಗಳಿಗೆ ಹಾಗೂ ಇದಕ್ಕೆ ಸಂಬಂಧ ಪಟ್ಟ ಹತ್ತಿರದ ಇಲಾಖೆಗಳ ಕಚೇರಿಗಳಿಗೆ ಹೋಗಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ವಿದ್ಯಾರ್ಥಿ ವೇತನ ಮತ್ತು ಶೈಕ್ಷಣಿಕ ಸಾಲವನ್ನು ಪಡೆಯಬಹುದಾಗಿದೆ.

ಭಾರತದಲ್ಲಿ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಇನ್ನೂ ದೇಶದಲ್ಲಿಯೇ ಇರುವ ಅಂಗೀಕೃತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳಲ್ಲಿ ವ್ಯಾಸಂಗ
ಮಾಡಲು ಸಹ ಪ್ರತ್ಯೇಕ ಸ್ಕೀಮ್ ನಲ್ಲಿ ಶೈಕ್ಷಣಿಕ ಸಾಲ ಮತ್ತು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ಇಲಾಖೆ, ಅಲ್ಪಸಂಖ್ಯಾತರ ಮತ್ತು ಬುಡಕಟ್ಟು ಜನಾಂಗ ಅಭಿವೃದ್ಧಿ ಇಲಾಖೆಗಳು ಸಾಲ ಸೌಲಭ್ಯವನ್ನು ನೀಡುತ್ತವೆ. ಪ್ರತಿ ವರ್ಷ ಜೂನ್ ತಿಂಗಳಲ್ಲಿ ಅಪ್ಲಿಕೇಶನ್‌ಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

Leave A Reply

Your email address will not be published.