ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರಗಳಲ್ಲಿ ಚುನಾವಣೆ 13-06-2022 ರಂದು ನಡೆಯಲಿದ್ದು, ಹೀಗಾಗಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಂದು ಶಾಲೆಗೆ ರಜೆಘೋಷಿಸಿದ್ದಾರೆ.
ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿಣ ಪದವೀಧರ ಮತಕ್ಷೇತ್ರದ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದೆ.
ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿನ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ, ಅನುದಾನರಹಿತ ವಿದ್ಯಾಸಂಸ್ಥೆಗಳು ಹಾಗೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಸೇರಿದಂತೆ ಖಾಸಗಿ ಕಾರ್ಖಾನೆಗಳು ಸಹಕಾರಿ ಸಂಘ ಸಂಸ್ಥೆಗಳಿಗೆ ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜೂನ್ 13 ರ ಸೋಮವಾರದಂದು ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.