BEL ನಲ್ಲಿ ಉದ್ಯೋಗವಕಾಶ | 43 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನಾಂಕ
ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್)ನ ಬೆಂಗಳೂರಿನ ಘಟಕದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೇ ದಿನ: 28.6.2022
ಹುದ್ದೆ : ಪ್ರಾಜೆಕ್ಟ್ ಇಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂರು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳುತ್ತಿದ್ದು ಕಾರ್ಯಕ್ಷಮತೆ ಆಧರಿಸಿ ನಾಲ್ಕು ವರ್ಷದವರೆಗೆ ಅವಧಿ ವಿಸ್ತರಿಸಲಾಗುವುದು.
ಹುದ್ದೆಯ ವಿವರ : ಪ್ರಾಜೆಕ್ಟ್ ಇಂಜಿನಿಯರ್ 43 ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 16 ಸ್ಥಾನ, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 11, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗೆ 5, ಎಸ್ಸಿ 7 ಮತ್ತು ಎಸ್ಟಿ ಅಭ್ಯರ್ಥಿಗೆ 4 ಸ್ಥಾನ ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಶೇ. 55 ಅಂಕದೊಂದಿಗೆ ಐಎಸ್/ಸಿಎಸ್ಇ/ಮೆಕ್ಯಾನಿಕಲ್/ಎಸಿಇ ವಿಷಯದಲ್ಲಿ ಬಿಇ ಅಥವಾ ಬಿಟೆಕ್ ಪದವಿ ಪಡೆದಿರಬೇಕು. ಕನಿಷ್ಠ 2 ವರ್ಷ ಸಂಬಂಧಪಟ್ಟ ಕ್ಷೇತ್ರದಲ್ಲಿ ವೃತ್ತಿ ಅನುಭವ ಹೊಂದಿರಬೇಕು.
ವಯೋಮಿತಿ : 1.6.022ಕ್ಕೆ ಅನ್ವಯವಾಗುವಂತೆ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಇತರ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಇರಲಿದೆ.
ವೇತನ : ಪ್ರಥಮ ವರ್ಷ 40,000, ದ್ವಿತೀಯ ವರ್ಷ 45,000, ತೃತೀಯ ವರ್ಷ 50,000 ಹಾಗೂ 4ನೇ ವರ್ಷ 55,000 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ಇದಲ್ಲದೆ ಪ್ರತಿ ವರ್ಷ 12,000 ರೂ. ಇತರ ಭತ್ಯೆ ನೀಡಲಾಗುವುದು.
ಅರ್ಜಿ ಶುಲ್ಕ ಮತ್ತು ಸಲ್ಲಿಕೆ ವಿಧಾನ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು ನಂತರ ಅಗತ್ಯ ದಾಖಲೆಗಳೊಂದಿಗೆ ನೀಡಲಾದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕ 400 ರೂ.ನೊಂದಿಗೆ 18% ಜಿಎಸ್‌ಟಿ ಪಾವತಿಸಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶವಿದೆ. ಅರ್ಜಿಯನ್ನು ಪೋಸ್ಟ್ ಮೂಲಕ ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯೆ : ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಂತರ ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ 1:5 ಅನುಪಾತದಲ್ಲಿ ಸಂದರ್ಶನ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು. ಸಂದರ್ಶನ ನಡೆಯುವ ದಿನಾಂಕವನ್ನು ಇ-ಮೇಲ್ ಮೂಲಕ ತಿಳಿಸಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ: Manager (HR/ES-SW), Barat Electronics Limited, Jalahalli Post,
Bengaluru-560013
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ