CET : ಜೂನ್ 16,17 ರಂದು ನಡೆಯುವ “ಸಿಇಟಿ” ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ “ಕಡ್ಡಾಯ” ನಿಯಮ ಜಾರಿಗೊಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ !!!

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಜೂ.16,17 ರಂದು ನಡೆಯಲಿದೆ.

 

ಈ ಪರೀಕ್ಷೆಗಳಿಗೂ ಹಿಜಾಬ್ ಸೇರಿದಂತೆ ಕಿವಿ ಮತ್ತು ತಲೆಯನ್ನು ಮುಚ್ಚುವಂತಹ ಯಾವುದೇ ವಸ್ತ್ರಗಳನ್ನು ಧರಿಸಿ ಬರುವಂತಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ .

ಪರೀಕ್ಷಾರ್ಥಿಗಳು ಯಾವುದೇ ಒಡವೆಗಳು, ತಲೆ, ಕಿವಿ ಮುಚ್ಚುವ ಉಡುಪು ಹಾಗೂ ಉದ್ದ ತೋಳಿನ ಉಡುಪು ಧರಿಸುವಂತಿಲ್ಲ.

ಈ ಸೂಚನೆಗಳನ್ನು ಪರೀಕ್ಷಾ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿದೆ. ಸಿಇಟಿ ಪರೀಕ್ಷೆಗೆ ಯಾವುದೇ ಸಮವಸ್ತ್ರ ನಿಗದಿ ಮಾಡಿಲ್ಲ. ಆದರೆ ಸರ್ಕಾರದ ವಸ್ತ್ರ ನಿಯಮವನ್ನು ಪಾಲಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ.

ಇನ್ನು ಸಿಇಟಿ ಪರೀಕ್ಷೆಗೆ ಹಾಜರಾಗುವವರು ಹಿಜಾಬ್ ಧರಿಸುವಂತಿಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವವರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ.

ಪರೀಕ್ಷಾ ಕೇಂದ್ರಗಳಲ್ಲಿ ಎನ್-95 ಅಥವಾ ಬಟ್ಟೆ ಮಾಸ್‌ಕ್‌ಗಳಿಗೆ ಅವಕಾಶ ಇರುವುದಿಲ್ಲ. ಕಡ್ಡಾಯವಾಗಿ ಸರ್ಜಿಕಲ್ ಮಾಸ್ಕ್ ಧರಿಸಬೇಕು. ಪರೀಕ್ಷೆ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಹಾಗೂ ಕೊಠಡಿ ಮೇಲ್ವಿಚಾರಕರು ಯಾವುದೇ ತರಹದ ಮೊಬೈಲ್, ಬ್ಲೂಟೂತ್, ಪೇಜರ್, ವೈರೆಲ್ಸ್ ಸೆಟ್, ಲಾ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ರಿಸ್ಟ್ ವಾಚ್ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಜೂನ್ 16 ರಂದು ಬೆಳಿಗ್ಗೆ 10-30 ರಿಂದ 11-50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಜೂನ್ 17 ರಂದು ಬೆಳಿಗ್ಗೆ 10-30 ರಿಂದ 11-50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

Leave A Reply

Your email address will not be published.