ದೇಶದಲ್ಲಿ ಕೋಮು ಗಲಭೆ ಭುಗಿಲೇಳುವ ಸಾಧ್ಯತೆ, ಈ ಕ್ರಮ ಕೈಗೊಂಡ ಸಿಎಂ ಬೊಮ್ಮಾಯಿ

ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ನೂಪುರ್ ಶರ್ಮಾ ಹೇಳಿಕೆ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ಅವಹೇಳನಕಾರಿ ಹೇಳಿಕೆಯಿಂದ ನೆರೆಯ ರಾಜ್ಯದಲ್ಲಿ ಘರ್ಷಣೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ನಿಯಂತ್ರಣದಲ್ಲಿದೆ. ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಪ್ರದೇಶಗಳಿಗೆ ಪೊಲೀಸ್ ತುಕಡಿಗಳ ನಿಯೋಜನೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕೆ.ಎಸ್.ಆರ್.ಪಿ ತುಕಡಿಗಳ ಚಲನೆ ಪ್ರಾರಂಭವಾಗಿದೆ. ಹುಬ್ಬಳ್ಳಿ ಪೊಲೀಸ್ ಆಯುಕ್ತರು ಮತ್ತು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದೆ ಎಂದರು.

ಎಲ್ಲಾ ಸಮುದಾಯಗಳ ನಾಯಕರೊಂದಿಗೆ ಮಾತುಕತೆ ನಡೆಸಿ, ಸೌಹಾರ್ದತೆಯನ್ನು ಕಾಪಾಡುವಂತೆ ಪೊಲೀಸ್ ಇನ್ಸಪೆಕ್ಟರ್ ಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

Leave A Reply

Your email address will not be published.