ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಕೊನೆ ದಿನ- ಜೂನ್ 22
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
ಹುದ್ದೆ : ಯಂಗ್ ಪ್ರೊಫೇಶನಲ್
ಒಟ್ಟು ಹುದ್ದೆಗಳು : 130
ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ
ಕಾರ್ಯ ನಿರ್ವಹಣೆ ಸ್ಥಳ : ದೇಶಾದ್ಯಾಂತ
ವೇತನ : 50000 ರೂ ಮಾಸಿಕ
ವಿದ್ಯಾರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಕೌಶಲ್ಯಗಳು:
ಅನಾಲಿಟಿಕ್, ಸಂಖ್ಯಾಶಾಸ್ತ್ರ, ಕಂಪ್ಯೂಟರ್ ಜ್ಞಾನ
ಅನುಭವ:
ಸಂಬಂಧ ಪಟ್ಟ ಕ್ಷೇತ್ರದಲ್ಲಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅನುಭವ ಹೊಂದಿರಬೇಕು.
ವಯೋಮಿತಿ:
ಅಧಿಸೂಚನೆ ಅನ್ವಯ ಅಭ್ಯರ್ಥಿಯೂ 24 ವರ್ಷದಿಂದ 40 ವರ್ಷ ವಯೋಮಿತಿ ಒಳಗೆ ಇರಬೇಕು (8/6/1982 ಮತ್ತು 8/6/ 1998ರೊಳಗೆ ಜನಿಸಿರಬೇಕು)
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ
ಅರ್ಜಿ ಸಲ್ಲಿಕೆ: ಆನ್ಲೈನ್
ಪ್ರಮುಖ ದಿನಾಂಕ:
ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಜೂನ್ 8, 2022
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 22, 2022
ಅರ್ಜಿ ಸಲ್ಲಿಕೆ ವಿಧಾನ:
•ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
•ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
•ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
•ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
•ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್: https://www.ncs.gov.in/