ರಣಜಿ ಪಂದ್ಯದಲ್ಲಿ ಶತಕ ಸಿಡಿಸಿ ದೇಶದ ಗಮನ ಸೆಳೆದ ಸಚಿವ

ಭಾರತದ ಕ್ರಿಕೆಟಿಗ ಹಾಗೂ ಪಶ್ಚಿಮ ಬಂಗಾಳದ ಕ್ರೀಡಾ ಹಾಗೂ ಯುವಜನ ಸಬಲೀಕರಣ ಸಚಿವ ಮನೋಜ್ ತಿವಾರಿ ರಣಜಿ ಟ್ರೋಫಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಎದುರು ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಮನೋಜ್ ತಿವಾರಿ 152 ಎಸೆತಗಳನ್ನು ಎದುರಿಸಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಶ್ಚಿಮ ಬಂಗಾಳದ ಕ್ರೀಡಾ ಸಚಿವರಾಗಿರುವ ಮನೋಜ್ ತಿವಾರಿ ತಮ್ಮ ರಾಜ್ಯ ರಣಜಿ ತಂಡದಲ್ಲಿ ಆಟಗಾರನಾಗಿ ಆಡುತ್ತಿದ್ದಾರೆ. ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಬಂಗಾಳ ಪರ ಮೊದಲ ಇನ್ನಿಂಗ್ಸ್‌ನಲ್ಲಿ 78 ರನ್ (124 ಎಸೆತ, 6 ಬೌಂಡರಿ, 2 ಸಿಕ್ಸ್) ಮತ್ತು ದ್ವಿತೀಯ ಇನ್ನಿಂಗ್ಸ್‌ನಲ್ಲಿ 136 ರನ್ (185 ಎಸೆತ, 19 ಬೌಂಡರಿ, 2 ಸಿಕ್ಸ್) ಸಿಡಿಸಿ ಮಿಂಚಿದ್ದಾರೆ. ಕೊನೆಯಲ್ಲಿ ಪಂದ್ಯ ಡ್ರಾದಲ್ಲಿ ಮುಕ್ತಾಯಗೊಂಡಿದೆ. ಈ ನಡುವೆ ಕ್ರೀಡಾ ಸಚಿವರ ಆಟಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.


Ad Widget

Ad Widget

Ad Widget

Ad Widget

Ad Widget

Ad Widget
error: Content is protected !!
Scroll to Top
%d bloggers like this: