ಚೊಚ್ಚಲ ಮಗುವಿಗೆ ತಾಯಿಯಾದ ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ !!

ಚಂದನವನದ ಖ್ಯಾತ ನಟಿ ಪ್ರಣಿತಾ ಸುಭಾಷ್ ನಿನ್ನೆ ಚೊಚ್ಚಲ ಮಗುವಿಗೆ ತಾಯಿಯಾಗಿದ್ದಾರೆ. ಪ್ರಣಿತಾ ಅವರಿಗೆ ಹೆಣ್ಣು ಮಗುವಾಗಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ.

‘ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು, ತಮ್ಮ ತಾಯ್ತನದ ಖುಷಿಯಲ್ಲಿದ್ದರು. ಇದೀಗ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಪ್ರಣೀತಾ ಹೆಣ್ಣು ಮಗುವಿಗೆ ತಾಯಿಯಾಗಿದ್ದಾರೆ. ಆಸ್ಟರ್‌ ಆರ್‌ವಿ ಆಸ್ಪತ್ರೆಯಲ್ಲಿ ಪ್ರಣಿತಾ ಹೆರಿಗೆಯಾಗಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಕುರಿತು ನಟಿ ಪ್ರಣಿತಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಸಿನಿಮಾರಂಗದಲ್ಲಿ ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೊಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ತಾವು ತಾಯಿಯಾಗಿರುವ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಪ್ರಣಿತಾ ಮತ್ತು ಅವರ ಕುಟುಂಬ ಮುದ್ದು ಹೆಣ್ಣು ಮಗುವಿನ ಆಗಮನ ಖುಷಿಯಲ್ಲಿದ್ದಾರೆ. ಅಭಿಮಾನಿಗಳು ನೆಚ್ಚಿನ ನಟಿಗೆ ಶುಭ ಹಾರೈಸುತ್ತಿದ್ದಾರೆ.

https://www.instagram.com/p/CeoKSGXscjx/?igshid=YmMyMTA2M2Y=

Leave A Reply

Your email address will not be published.