ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಸೋನಿಯಾ ಗಾಂಧಿ (75) ಅವರು ಇಂದು (ಜೂನ್ 12) ರಂದು “ಕೋವಿಡ್ ಸಂಬಂಧಿತ ಸಮಸ್ಯೆಗಳ ಕಾರಣ” ದೆಹಲಿಯ ಸ‌ರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ತಿಳಿಸಿದ್ದಾರೆ. ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಸುರ್ಜೆವಾಲ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಕೋವಿಡ್ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಅವರನ್ನು ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ವೀಕ್ಷಣೆಗೆ ಇಡಲಾಗಿದೆ. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ ಪಕ್ಷದ ಎಲ್ಲ ಕಾರ್ಯಕರ್ತರಿಗೂ ಮತ್ತು ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು ಎಂದು ಸುರ್ಜೇವಾಲಾ ಟ್ವಿಟರ್‌ನಲ್ಲಿ ಹೇಳಿದ್ದಾರೆ.

Leave A Reply

Your email address will not be published.