ಸುಬ್ರಹ್ಮಣ್ಯ- ಗುಂಡ್ಯ ರಸ್ತೆಯ ಅನಿಲದಲ್ಲಿ ಚಲಿಸುತ್ತಿದ್ದ ಬಸ್ ಮೇಲೆಯೇ ಬಿದ್ದ ಮರ !! | ಅಪಾಯದಿಂದ ಪಾರಾದ ಪ್ರಯಾಣಿಕರು, ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ಕಡಬ: ಚಲಿಸುತ್ತಿದ್ದ ಬಸ್ ಮೇಲೆಯೇ ರಸ್ತೆ ಬದಿಯ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ಜೂ.12 ರಂದು ನಡೆದಿದೆ.

ಸುಬ್ರಹ್ಮಣ್ಯ ದಿಂದ ಬೆಂಗಳೂರು ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕ.ರಾ.ಸಾ.ಸಂ. ಬಸ್ ನ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಈಗಾಗಲೇ ವಿಪರಿತ ಮಳೆಯೂ ಸುರಿಯುತ್ತಿದ್ದು ಈ ಮಳೆಗೆ ಅಪಾಯಕಾರಿಯಾಗಿರುವ ಮರಗಳು ಉರುಳಿದೆ ಎಂದು ಹೇಳಲಾಗುತ್ತಿದೆ.

ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ಈ ರಸ್ತೆಯಲ್ಲಿ ಆಗಾಗ ರಸ್ತೆ ಬದಿಯ ಮರಗಳು ಬೀಳುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಳ್ಳಲಿಲ್ಲ, ಈಗಾಗಲೇ ಅಪಾಯಕಾರಿ ಮರಗಳೆಂದು ಗುರುತಿಸಿದ್ದರೂ ಅಂತಹ ಮರಗಳನ್ನು ತೆರವುಗೊಳಿಸಲು ಕಾನೂನಿನ ಕುಂಟು ನೆಪ ಹೇಳುತ್ತಿರುವ ಅರಣ್ಯ ಇಲಾಖಾ ಅಧಿಕಾರಿಗಳು ಅಪಾಯ ಸಂಭವಿಸಿದಾಗ ಸ್ಥಳಕ್ಕೆ ಭೇಟಿ ನೀಡುವ ಕೆಲಸ ಮಾತ್ರ ಮಾಡುತ್ತಾರೆ. ಇನ್ನಾದರೂ ರಸ್ತೆ ಬದಿಯ ಮರ ತೆರವುಗೊಳಿಸುವಲ್ಲಿ ಅರಣ್ಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave A Reply