ನೈರುತ್ಯ ರೇಲ್ವೆಯಿಂದ ದಕ್ಷಿಣಕನ್ನಡ ಜನತೆಗೆ ಸಿಹಿ ಸುದ್ದಿ

ನೈಋತ್ಯ ರೈಲ್ವೇ ಮೈಸೂರು ವಿಭಾಗವು ಮೈಸೂರು ನಿಲ್ದಾಣದಲ್ಲಿ ಪ್ರಾರಂಭಿಸಿದ್ದ’ ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಯನ್ನು ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು ಹಾಗೂ ಬಂಟ್ವಾಳ ನಿಲ್ದಾಣಗಳಿಗೆ‌ ವಿಸ್ತರಿಸಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

 2022-23ರ ಕೇಂದ್ರ ಬಜೆಟ್‌ನಲ್ಲಿ “ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆ ಘೋಷಿಸಿ ಮೈಸೂರು ನಿಲ್ದಾಣದಲ್ಲಿ ಆರಂಭಿಸಲಾಗಿತ್ತು. ಪ್ರಯಾಣಿಕರ ಸಕಾರಾತ್ಮಕ ಪ್ರತಿಕ್ರಿಯೆಯ ಫ‌ಲವಾಗಿ ಸುಬ್ರಹ್ಯಣ್ಯ, ಪುತ್ತೂರು, ಬಂಟ್ವಾಳ ಒಳಗೊಂಡಂತೆ ಒಟ್ಟು 67 ನಿಲ್ದಾಣಗಳಿಗೆ ವಿಸ್ತರಿಸಲಾಗಿದೆ.

ನಿಲ್ದಾಣಗಳಲ್ಲಿ ಸ್ಥಳೀಯ ವಿಶೇಷ ಉತ್ಪನ್ನಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಒದಗಿಸುವ ಮೂಲಕ ಅವುಗಳನ್ನು ಉತ್ತೇ ಜಿಸುವುದು ಉದ್ದೇಶ.

ಪ್ರಯಾಣಿಕರಿಗೆ ಸುಲಭವಾಗಿ ಪ್ರವೇಶ ಸಾಧ್ಯವಾಗುವ ಸ್ಥಳ ದಲ್ಲಿ ತಾತ್ಕಾಲಿಕ ಕ್ರಿಯಾತ್ಮಕ ಅಂಗಡಿಯನ್ನು ಭಾಗವಹಿಸುವವರಿಗೆ ಲಭ್ಯವಾಗುವಂತೆ ಮಾಡ ಲಾಗುತ್ತದೆ. ಭಾಗವಹಿ ಸುವವರು ಉತ್ಪನ್ನಗಳನ್ನು ನಿಲ್ದಾಣದಲ್ಲಿ ಮತ್ತು ಪ್ಲಾಟ್‌ಫಾರ್ಮ್ಗಳಲ್ಲಿ ಮಾರಾಟ ಮಾಡಬಹುದು.

ಈ ಉತ್ಪನ್ನಗಳ ಮೂಲಕ ವ್ಯವಹಾರ ನಡೆಸುವ ಏಜೆನ್ಸಿಗಳು, ಕುಶಲಕರ್ಮಿಗಳು, ನೇಕಾರರು, ಕರಕುಶಲಿಗಳು, ಸ್ವ-ಸಹಾಯ ಗುಂಪುಗಳು, ಬುಡಕಟ್ಟು ಸಹಕಾರ ಸಂಘಗಳು ಮತ್ತು ಸಮಾಜದ ಕಟ್ಟಕಡೆಯ ಹಾಗೂ ದುರ್ಬಲ ವರ್ಗಗಳಿಂದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರತೀ ನಿಲ್ದಾಣಕ್ಕೆ ಗುರುತಿಸಲಾದ ಉತ್ಪನ್ನಗಳ ಸಂಪೂರ್ಣ ವಿವರ http://www.swr.indianrailways.gov.inನಲ್ಲಿ ಲಭ್ಯವಿದೆ. ಅರ್ಜಿಗಳನ್ನು ಶೀಘ್ರದಲ್ಲೇ ಆಹ್ವಾನಿಸಲಾಗುವುದು ಮತ್ತು ದಿನಾಂಕವನ್ನು ಸೂಚಿಸಲಾಗುವುದು. ಆಸಕ್ತರು ಮೈಸೂರಿನಲ್ಲಿ ರೈಲ್ವೇಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರನ್ನು ಭೇಟಿ ಮಾಡಬಹುದು ಅಥವಾ 8884303801 ಸಂಪರ್ಕಿಸಬಹುದು.

error: Content is protected !!
Scroll to Top
%d bloggers like this: