ಬೆಳ್ತಂಗಡಿ : ಇಂಟರ್ವ್ಯೂಗೆಂದು ಬೆಂಗಳೂರಿಗೆ ತೆರಳಿದ್ದ ಕಾಯರ್ತಡ್ಕದ ಶಿಕ್ಷಕಿ ಹೃದಯಾಘಾತದಿಂದ ನಿಧನ!

ಬೆಳ್ತಂಗಡಿ : ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ
ಶಾಲೆಯ ಶಿಕ್ಷಕಿ, ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.

 

ಮೃತರು ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ ಭಾರತಿ ಎಸ್(42ವ).

ಇವರು ಜೂ.12ರಂದು ಬೆಂಗಳೂರಿನಲ್ಲಿ ಇಂಟರ್ವ್ಯೂಗೆ ತೆರಳಿದ್ದು, ಈ ವೇಳೆ ಬೆಳಗ್ಗೆ 10.00 ಗಂಟೆಗೆ ಅಲ್ಲಿ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ
ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ದಿವ್ಯಜ್ಯೋತಿ ಶಾಲೆಯಲ್ಲಿ ಕಳೆದ 8 ವರ್ಷಗಳಿಂದ
ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೃತರ ಪತಿ ಡಾ.ಕುಶಾಲಪ್ಪ ಇವರು ಮೇಲಂತಬೆಟ್ಟು ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ. ಮೃತರು ಪತಿ, 1 ಗಂಡು, 1 ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

Leave A Reply

Your email address will not be published.