ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಲು ಜೂನ್ 30 ಕೊನೆಯ ದಿನ

ಕಲಬುರಗಿ : ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅತೀ ಅವಶ್ಯವಾಗಿದ್ದು, ಇ-ಕೆವೈಸಿ ಮಾಡಿಕೊಳ್ಳದೇ ಇರುವ ಇನ್ನುಳಿದ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ಪೂರ್ಣಗೊಳಿಸಲು ತಿಳಿಸಿದೆ.

ಇ-ಕೆವೈಸಿ ಮಾಡಿಕೊಳ್ಳಲು ಜೂನ್ ತಿಂಗಳಲ್ಲಿ ಕೊನೆಯ ಅವಕಾಶವಿರುವ ಪ್ರಯುಕ್ತ ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರು ಜೂನ್ 30 ರೊಳಗಾಗಿ ತಪ್ಪದೇ ಇ-ಕೆವೈಸಿ ಮಾಡಿಕೊಳ್ಳಬೇಕು. ಸರ್ಕಾರದ ನಿರ್ದೇಶನದಂತೆ ಎಲ್ಲಾ ಪಡಿತರ ಚೀಟಿದಾರರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಅಂದರೆ ಹೆಬ್ಬಟ್ಟು ಗುರುತಿನ ದೃಢೀಕರಣ ಮಾಡಿಕೊಳ್ಳಬೇಕಾಗಿದೆ.

ಕರ್ನಾಟಕದಲ್ಲಿ ವಾಸವಾಗಿರುವ ಸ್ಥಳದಲ್ಲಿ ತಮ್ಮ ಸಮೀಪದ ಯಾವುದೇ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಕೊಳ್ಳಲು ಸರ್ಕಾರವು ಅವಕಾಶ ಕಲ್ಪಿಸಿದೆ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿರುವ 983 ನ್ಯಾಯಬೆಲೆ ಅಂಗಡಿಗಳಲ್ಲಿರುವ ಪಿಒಎಸ್ ವ್ಯವಸ್ಥೆಯ ಮೂಲಕ ಉಚಿತವಾಗಿ ಇ-ಕೆವೈಸಿ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಈವರೆಗೆ ಜಿಲ್ಲೆಯಲ್ಲಿ ಪ್ರತಿಶತ 90 ರಷ್ಟು ಎನ್‍ಎಫ್‍ಎಸ್‍ಎ ಪಡಿತರ ಚೀಟಿದಾರರ ಇ-ಕೆವೈಸಿ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Leave A Reply

Your email address will not be published.