RDWSD: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನೇಮಕಾತಿ | ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನಾಂಕ
ಜಲ ಜೀವನ್ ಮಿಷನ್ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಮತ್ತು ಉಪವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.
ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳನ್ನು ಮಾನವ ಸಂಪನ್ಮೂಲಕ ಸಂಸ್ಥೆಯ ಮೂಲಕ ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕಿರಿಯ ಸಮಾಲೋಚಕರ ಈ ಹುದ್ದೆಗೆ ಆಸಕ್ತಿ ಹಾಗೂ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್ 24 ಆಗಿದೆ.
ಹೊರ ಗುತ್ತಿಗೆ ಆಧಾರದ ಮೇಲೆ ಮೇಲ್ಕಂಡ ಹುದ್ದೆಗೆ ಇಂಜಿನಿಯರಿಂಗ್, ಡಿಪ್ಲೋಮಾ ಪದವೀಧರರಿಗೆ ಈ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 11 ತಿಂಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆ ಮಾಡಲಾಗುವುದು. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇತರೆ ಮಾಹಿತಿಗಳು ಈ ಕೆಳಗಿನಂತೆ ಇದೆ.
ಸಂಸ್ಥೆಯ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆ: ಜೂನಿಯರ್ ಕನ್ಸಲ್ವೆಂಟ್ಸ್
ಸಹಾಯಕ ಇಂಜಿನಿಯರ್ – 12
ಕಿರಿಯ ಇಂಜಿನಿಯರ್ – 06
ಹುದ್ದೆಗಳ ಸಂಖ್ಯೆ: 18
ಉದ್ಯೋಗ ಸ್ಥಳ: ಚಿಕ್ಕಮಗಳೂರು
ಸಂಬಳ: 30000-40000 ರೂ ಪ್ರತಿ ತಿಂಗಳು
ಅನುಭವ : ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕರ್ನಾಟಕ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ: ಅರ್ಹತೆ, ಅನುಭವ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 13, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂನ್ 24, 2022
ವಿಶೇಷ ಸೂಚನೆ : ಅರ್ಜಿಯನ್ನು ಸರ್ಕಾರದ ಕೆಲಸದ ಅವಧಿಯಲ್ಲಿ ಮಾತ್ರ ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಸಲ್ಲಿಸತಕ್ಕದ್ದು.
ಸರ್ಕಾರಿ ರಜೆ ದಿನಗಳು ಮತ್ತು ಭಾನುವಾರ ರಜೆ ಹುದ್ದೆಗೆ ಅರ್ಜಿ ಸಲ್ಲಿಸುವುದನ್ನು ಸ್ವೀಕೃತಿ ಮಾಡುವುದಿಲ್ಲ.
ಅರ್ಜಿ ಸಲ್ಲಿಕೆ ಹೇಗೆ ?
-ಅಧಿಸೂಚನೆ ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
– ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳು.
ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.
ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.