ರಾಜ್ಯದಲ್ಲಿ ಕೊರೋನಾ ವೈರಸ್ ನಡುವೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ !!

ದೇಶದಲ್ಲಿ ಪ್ರತಿದಿನ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಒಮ್ಮೆಲೆ ಹೆಚ್ಚಾಗಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಹೀಗಿರುವಾಗ ರಾಜ್ಯದಲ್ಲಿ ಕೋವಿಡ್-19 ನಾಲ್ಕನೇ ಅಲೆಯ ಭೀತಿಯ ನಡುವೆಯೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಈ ತಿಂಗಳ 10ರವರೆಗೆ ರಾಜ್ಯದಲ್ಲಿ 1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣ ಶೇಕಡಾ 50ರಷ್ಟು ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಈ ವರ್ಷ 38 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಹಿತಿ ನೀಡಿದೆ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಪ್ರತಿದಿನ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಈಗಾಗಲೇ ಮಳೆಗಾಲ ಶುರುವಾಗಿದೆ. ಹೀಗಾಗಿ ಸಾಮಾನ್ಯವಾಗಿ ಎಲ್ಲೆಡೆ ಇತರೆ ಸಾಂಕ್ರಾಮಿಕ ರೋಗದ ಜೊತೆಗೆ ಡೆಂಗ್ಯೂ ಕೂಡ ಶುರುವಾಗಿದೆ. ಮುಂಗಾರು ಆರಂಭವಾಗುತ್ತಿದಂತೆಯೇ ಈಡಿಸ್‌ ಸೊಳ್ಳೆ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಆರಂಭಿಸುತ್ತದೆ. ಈ ಸೊಳ್ಳೆ ಕಚ್ಚಿದರೆ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತದೆ.

ಈಡಿಸ್ ಇದು ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ. ಸಂಗ್ರಹಿಸಿಟ್ಟ ತಿಳಿ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತದೆ. ಈ ಜ್ವರವು ಸಾಮಾನ್ಯ ಜ್ವರ, ಡೆಂಗ್ಯೂ ಹೆಮೊರೈಜಿನ್ ಅಂದರೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವುದು ಮತ್ತು ಡೆಂಗ್ಯೂ ಶಾಕ್‌ ಸಿಂಡ್ರೋಮ್‌ ಅಂದರೆ ದೇಹದಲ್ಲಿ ರಕ್ತ ಸ್ರಾವವಾಗಿ ರೋಗಿ ಗಂಭೀರ ಹಂತಕ್ಕೆ ತಲುಪುವ ಸಾಧ್ಯತೆಗಳಿರುವ ಹಂತಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರೋಗಿಗೆ ರಕ್ತ ನೀಡುವುದು ಅನಿವಾರ್ಯವಾಗುತ್ತದೆ.

Leave A Reply

Your email address will not be published.