ಜೂನ್ ನಿಂದ ಈ ರಾಜ್ಯದಲ್ಲಿ ಉಚಿತ ಸಿಲೆಂಡರ್

 

ಈ ಹಣದುಬ್ಬರದ ನಡುವೆ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಎಲ್‌ಪಿಜಿ ಸಿಲಿಂಡರ್ ದರವು ಭಾರೀ ಏರಿಕೆ ಕಂಡಿದೆ. ಈ ನಡುವೆ ಈ ಒಂದು ರಾಜ್ಯದಲ್ಲಿ ಜನರ ಹೊರೆ ಕಡಿಮೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಈ ರಾಜ್ಯದಲ್ಲಿ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲು ಸಜ್ಜಾಗಿದೆ.

ಗೋವಾದಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮತ್ತೆ ಅಧಿಕಾರಕ್ಕೆ ಬಂದರೆ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು ಎಂದು ಭರವಸೆ ನೀಡಿದೆ. ಈಗ ಅಧಿಕಾರಕ್ಕೆ ಬಂದ ಬಳಿ ಭರವಸೆ ಪೂರೈಸಲು ಮುಂದಾಗಿದೆ.

ಗೋವಾ ಸರ್ಕಾರದ ಪ್ರಕಾರ 4 ಲಕ್ಷ ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯವನ್ನು ಹೊಂದಿರುವವರು ಈ ಯೋಜನೆಯಲ್ಲಿ ಫಲಾನುಭವಿಗಳು ಆಗಬಹುದಾಗಿದೆ. “ಸುಮಾರು 37,000 ಜನರಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಈ ಹಣಕಾಸು ವರ್ಷದ ಅಂತ್ಯದಲ್ಲಿ ಈ ಫಲಾನುಭವಿಗಳ ಖಾತೆಗೆ ಈ ಹಣವು ಡೆಪಾಸಿಟ್ ಆಗಲಿದೆ,” ಎಂದು ಸಚಿವರು ಹೇಳಿದ್ದಾರೆ.

ನಾವು ಚುನಾವಣಾ ಪೂರ್ವ ಭರವಸೆಯನ್ನು ಪೂರೈಸಲು ಮುಂದಾಗಿದ್ದೇವೆ. ನಮ್ಮ ಭರವಸೆಯಂತೆ ಬಿಪಿಎಲ್ ಕಾರ್ಡ್‌ದಾರರಿಗೆ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲಾಗುವುದು,” ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಗೋವಿಂದ ಗೌಡೆ ತಿಳಿಸಿದ್ದಾರೆ.

Leave A Reply

Your email address will not be published.