ನರೇಂದ್ರ ಮೋದಿಗೆ ನಾಯಿ ಸಾವು ಬರುತ್ತದೆ !! | ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್ ದಾಖಲು

Share the Article

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಈ ಸಂಬಂಧ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಹಾಗೂ 48 ಗಂಟೆಗಳಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದು, ವಿಫಲವಾದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಮಂಗಳವಾರ ಕೇಂದ್ರ ತನಿಖಾ ಸಂಸ್ಥೆಯು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ನಾಗ್ಪುರದ ಇಡಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಮತ್ತು ಮಾಜಿ ನಗರಾಧ್ಯಕ್ಷರು ಭಾಗವಹಿಸಿದ್ದರು.

ಈ ವೇಳೆ ಶೇಕ್ ಹುಸೇನ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆ. ಜೊತೆಗೆ ನರೇಂದ್ರ ಮೋದಿಗೂ ನಾಯಿಯ ಸಾವು ಬರುತ್ತದೆ ಎಂದು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಈ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Leave A Reply

Your email address will not be published.