ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ತೃತೀಯ

ಪುತ್ತೂರು: ಬೆಂಗಳೂರಿನ ಯೋಗ ಗಂಗೋತ್ರಿ ಸಂಸ್ಥೆಯು ಜೂನ್ ಐದರಂದು ಆನ್‌ಲೈನ್ ಮೂಲಕ ನಡೆಸಿದ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಪ್ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರು 16 ರಿಂದ 20 ವರ್ಷದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈತನು ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

 

Leave A Reply

Your email address will not be published.