KSAT : ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ವೇತನ 42,000/-

ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ  ಚಾಲಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

10ನೇ ತರಗತಿ ಪಾಸ್ ಆಗಿ ಡ್ರೈವಿಂಗ್ ಕಲಿಕೆ ತಿಳಿದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 22 ಕಡೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಸಂಸ್ಥೆ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (KSAT)

ಹುದ್ದೆ : ಚಾಲಕ

ಹುದ್ದೆಗಳ ಸಂಖ್ಯೆ : 02

ಉದ್ಯೋಗ ಸ್ಥಳ : ಬೆಂಗಳೂರು – ಬೆಳಗಾವಿ – ಕಲಬುರಗಿ

ವೇತನ : 21400-42000ರೂ ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಮಾನ್ಯ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ವಯಸ್ಸಿನ ಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.

ವಯಸ್ಸಿನ ಸಡಿಲಿಕೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1

ವಯಸ್ಸಿನ ಸಡಿಲಿಕೆ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಎಲ್ಲಾ ಇತರ ಅಭ್ಯರ್ಥಿಗಳು: ರೂ.150 ರೂ ಪಾವತಿ ವಿಧಾನ: ಐಪಿಒ ಅಥವಾ ಡಿಮಾಂಡ್ ಡ್ರಾಫ್ಟ್

ಆಯ್ಕೆ ಪ್ರಕ್ರಿಯೆ : ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 7, 2022
ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 22, 2022

ಅರ್ಜಿ ಸಲ್ಲಿಕೆ ವಿಧಾನ :
ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ). ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.

ಕೊನೆಯದಾಗಿ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕಿದೆ. ರಿಜಿಸ್ಟ್ರಾರ್, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ, 7 ನೇ ಮಹಡಿ, ಕಂದಾಯ ಭವನ, ಕೆ.ಜಿ. ರಸ್ತೆ, ಬೆಂಗಳೂರು – 560009

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.