SBI : 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ | ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನಾಂಕ

Share the Article

ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. 
ಒಟ್ಟು 211 ಹುದ್ದೆಗಳ ಪೈಕಿ ಬೆಂಗಳೂರಿಗೆ 23 ಹುದ್ದೆ ನಿಗದಿಯಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಗಿದೆ. ಈ ಹುದ್ದೆ ನೇಮಕಾತಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಕಂಡಂತೆ ಇದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
ಜೂನ್ 15, 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 30, 2022

ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹುದ್ದೆಗಳ ಸಂಖ್ಯೆ: 211

ಉದ್ಯೋಗ ಸ್ಥಳ: ಅಖಿಲ ಭಾರತ
ಪೋಸ್ಟ್ ಹೆಸರು: ಎಫ್‌ಎಲ್‌ಸಿ ಸಲಹೆಗಾರರು, ಎಫ್‌ಎಲ್‌ಸಿ ನಿರ್ದೇಶಕರು
ಸಂಬಳ: 35000-60000 ರೂ ಪ್ರತಿ ತಿಂಗಳು
ಎಫ್‌ಎಲ್‌ಸಿ ಸಲಹೆಗಾರರು : 207 ಹುದ್ದೆ
ಎಫ್‌ಎಲ್‌ಸಿ ನಿರ್ದೇಶಕರು : 4 ಹುದ್ದೆ

ಶೈಕ್ಷಣಿಕ ಅರ್ಹತೆ: ಎಸ್‌ಬಿಐ ನೇಮಕಾತಿ ನಿಯಮಗಳ ಪ್ರಕಾರ ಇದ್ದು ಅಭ್ಯರ್ಥಿಗಳು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆಯನ್ನು ಹೊಂದಿರಬೇಕು. ಜೊತೆಗೆ ಅಗತ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯಸ್ಸಿನ ಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗೆ ಕನಿಷ್ಠ 60 ವರ್ಷಗಳು ಹಾಗೂ ಗರಿಷ್ಠ 63 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

ಆಯ್ಕೆ ಪ್ರಕ್ರಿಯೆ: ಶಾರ್ಟ್‌ಲಿಸ್ಟಿಂಗ್, ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ.

Leave A Reply

Your email address will not be published.