ಶಿಷ್ಯವೇತನಕ್ಕಾಗಿ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ!

Share the Article

2022-23ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ tw.kar.nic.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 05-07-2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ, ಅರ್ಜಿಯನ್ನು ಸಂಬಂಧಿಸಿದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ಬೆಳಗಾವಿ ಇಲ್ಲಿಗೆ ಸಲ್ಲಿಸಬೇಕು.

ಇರಬೇಕಾದ ಅರ್ಹತೆಗಳು :  ಈ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ಆದಾಯ ಎರಡು ಲಕ್ಷದ ಒಳಗೆ ಇರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 40
ವರ್ಷ ದಾಟಿರಬಾರದು.
ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಬೇಕಾಗುವ ದಾಖಲೆಗಳು : ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಹಿಂದಿನ ವರ್ಷಗಳ ಅಂಕಪಟ್ಟಿ. ಹೆಚ್ಚಿನ ಮಾಹಿತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ನೆಹರು ನಗರ ಬೆಳಗಾವಿ ಇಲ್ಲಿಗೆ ನೇರವಾಗಿ ಭೇಟಿ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ tw.kar.nic.in ಭೇಟಿ ನೀಡಬಹುದಾಗಿದೆ.

Leave A Reply