ಪಡುಬಿದ್ರಿ:ರಸ್ತೆ ದಾಟಲು ನಿಂತಿದ್ದ ವೇಳೆ ಲಾರಿ ಡಿಕ್ಕಿ!! ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

ರಸ್ತೆದಾಟಲು ನಿಂತಿದ್ದ ಪಾದಚಾರಿ ವ್ಯಕ್ತಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸಾಂತೂರು ನಿವಾಸಿ ಜಯರಾಮ ಆಚಾರ್ಯ ಎಂದು ಗುರುತಿಸಲಾಗಿದ್ದು, ಇವರು ರಾಷ್ಟೀಯ ಹೆದ್ದಾರಿ 66ರ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಅತೀವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಜಯರಾಮ ಆಚಾರ್ಯ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Leave A Reply