ಉಡುಪಿಯಲ್ಲಿ ಎಸಿಬಿ ಶಾಕಿಂಗ್ ಟ್ರೀಟ್ಮೆಂಟ್ | ಸಣ್ಣ ನೀರಾವರಿ ಇಲಾಖೆಯ ಎಇ ಹರೀಶ್ ನಿವಾಸದ ಮೇಲೆ ದಾಳಿ

ರಾಜ್ಯದ 21 ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ. ಇಂದು ಬೆಳಗ್ಗೆ ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಈ ದಾಳಿ ನಡೆಸಲಾಗಿದೆ.

 

ಹರೀಶ್ ಮನೆ ಮೇಲೆ ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣಗಳು ಮನೆಯಲ್ಲಿ ಪತ್ತೆಯಾಗಿದ್ದು, ಎರಡು ಕೆಜಿಗೂ ಅಧಿಕ ಚಿನ್ನವನ್ನು ಅಧಿಕಾರಿಗಳು ಪತ್ತೆಮಾಡಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ನಗದು ಇರಿಸಿಕೊಂಡಿದ್ದ ಹರೀಶ್ ರವರು ದುಬಾರಿ ಬೆಲೆಯ ವಾಚುಗಳು, ಮೂರು ವಾಹನಗಳು, ಚಿನ್ನದ ತಟ್ಟೆ, ಚಿನ್ನದ ತಗಡು, ಅಪಾರ ಚಿನ್ನದ ಆಭರಣಗಳು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

15ಕ್ಕೂ ಹೆಚ್ಚು ಚಿನ್ನದ ಬಳೆ, 30ಕ್ಕೂ ಹೆಚ್ಚು ಸರ, ನೆಕ್ಲೆಸ್,ಬ್ರಾಸ್ಲೆಟ್ ಪತ್ತೆಯಾಗಿದೆ. ಚಿನ್ನದ ಒಡವೆಗಳು, ಉಂಗುರ ದೇವರ ಮೂರ್ತಿ ಹಾಗು ಆಸ್ತಿ ಪತ್ರ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ಸೇರಿದಂತೆ 15 ಅಧಿಕಾರಿಗಳ ತಂಡದ ದಾಳಿ ನಡೆಸಿದೆ.

Leave A Reply

Your email address will not be published.