ಮಂಗಳೂರು : ಬಿಬಿಎಂ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಬಿಎಂ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗಂಬಿಲದ ಮನೆಯೊಂದರಲ್ಲಿ ಗುರುವಾರ ಸಂಜೆ ( ಜೂ.16 ರಂದು) ನಡೆದಿದೆ.

ಹರ್ದೀಪ್‌ (20) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಈತನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ವೈದ್ಯರು ತಪಾಸಣೆ ನಡೆಸಿ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಮೃತ ಯುವಕ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply