ಖ್ಯಾತ ನಟಿ ಸಾಯಿಪಲ್ಲವಿ ವಿರುದ್ಧ “ಎಫ್ ಐಆರ್” !

ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಕರ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ದೂರು ದಾಖಲಾಗಿದೆ.

ನಟಿ ಸಾಯಿ ಪಲ್ಲವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳದ ಸದಸ್ಯ ಅಖಿಲ್ ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ಯೂಟ್ಯೂಬ್ ಚಾನೆಲ್‌ ಒಂದರಲ್ಲಿ ನೀಡಿದ ಸಂದರ್ಶನ ಕಾರ್ಯಕ್ರಮದಲ್ಲಿ ನಟಿ ಸಾಯಿ ಪಲ್ಲವಿ, ಕಾಶ್ಮೀರಿ ಭಯೋತ್ಪಾದಕರನ್ನು ಗೋರಕ್ಷಕರಿಗೆ ಹೋಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಟಿ ಸಾಯಿಪಲ್ಲವಿ ಹೇಳಿದ ಈ ಹೇಳಿಕೆಯನ್ನು ಪರಿಗಣಿಸಿ ದೂರು ನೀಡಿದ್ದಾರೆ. ನಟಿ ಹಾಗೂ ಚಿತ್ರದ ನಿರ್ದೇಶಕ ವೇಣು ಉಡುಗುಲ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ದೂರಿನ ಮೇಲೆ ಪೊಲೀಸರು ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿಲ್ಲ.

ಸಾಯಿ ಪಲ್ಲವಿ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಕೆಲವರು ಸಾಯಿ ಪಲ್ಲವಿ ಪರವಾಗಿ ಟ್ವಿಟ್ ಮಾಡಿದ್ದರೆ, ಮತ್ತೆ ಕೆಲವರು ಸಾಯಿ ಪಲ್ಲವಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ಟ್ವಿಟರ್‌ನಲ್ಲಿ ಬಾಯ್ಕಾಟ್ ವಿರಾಟಪರ್ವಂ ಎಂದು ಟ್ವೀಟ್ ಅಬ್ಬರ ಹೆಚ್ಚಾಗಿದೆ.

error: Content is protected !!
Scroll to Top
%d bloggers like this: