ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂದು ಪಿಯು ಬೋರ್ಡ್ ಪ್ರಕಟಿಸಿದೆ.
ಈಗ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 ಮೂಲಕ ಉಡುಪಿ ಎರಡನೇ ಸ್ಥಾನ ಪಡೆದರೆ ಶೇ.77.14 ಪಡೆಯುವ ಮೂಲಕ ವಿಜಯಪುರ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು ಚಿತ್ರದುರ್ಗ ಶೇ. 49.31% ಮೂಲಕ ಕೊನೆಯ ಸ್ಥಾನ ಪಡೆದುಕೊಂಡಿದೆ.
ಇನ್ನು ಈ ಬಾರಿ 5,99,794 ಹೊಸಬರು ಪರೀಕ್ಷೆ ತೆಗೆದುಕೊಂಡಿದ್ದರು. ಇದ್ರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ. ರಿಪೀಟರ್ಸ್ 61838 ರಲ್ಲಿ 14403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಖಾಸಗಿ ಅಭ್ಯರ್ಥಿಗಳು 21931 ಮಂದಿ ಪರೀಕ್ಷೆ ಬರೆದಿದ್ದರು. ಇದರಲ್ಲಿ 5866 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಬಿಸಿ ನಾಗೇಶ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 25 ರೊಳಗೆ ಪ್ರಕಟಿಸೋದಾಗಿ ಹೇಳಿತ್ತು. ಇಂದು ಫಲಿತಾಂಶ ಪ್ರಕಟಿಸೋದಾಗಿ ಹೇಳಿದೆ. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ?
ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಿ.
ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ
ರಿಜಿಸ್ಟರ್ ನಂಬರ್ ಟೈಪ್ ಮಾಡಿ.
ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
ಆಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.
ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.karresult.nic.in ನಲ್ಲಿ ಫಲಿತಾಂಶ ಪಡೆಯಬಹುದಾಗಿದೆ.
614503