ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ | ಖಾಲಿ ಹುದ್ದೆ-400, ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 14

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಕೆಲಸ ಮಾಡಲು ಆಸಕ್ತಿಯಿರುವ ಯುವಕರಿಗೆ ಸುವರ್ಣಾವಕಾಶವಿದ್ದು, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರಗಳು:
ಖಾಲಿ ಇರುವ ಹುದ್ದೆಗಳ ಸಂಖ್ಯೆ:
ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)- 400 ಹುದ್ದೆಗಳು


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಅರ್ಹತಾ ಮಾನದಂಡಗಳು:
ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಭೌತಶಾಸ್ತ್ರ ಮತ್ತು ಗಣಿತದೊಂದಿಗೆ B.Sc ಅಥವಾ ಯಾವುದೇ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಮಾಡಿರಬೇಕು. ಅಲ್ಲದೆ, ಅಭ್ಯರ್ಥಿಯು 10+2 ಮಾನದಂಡದ ಅರ್ಹತೆಯಲ್ಲಿ ಇಂಗ್ಲಿಷ್ ಬರವಣಿಗೆ ಮತ್ತು ಮಾತನಾಡುವ ಉತ್ತಮ ಪ್ರಾವೀಣ್ಯತೆಯನ್ನು ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ:
ಈ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 40000 – 140000 ವೇತನವನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14ನೇ ಜುಲೈ 2022

ಅರ್ಜಿ ಸಲ್ಲಿಕೆ:
ಈ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್ : aai.aero

error: Content is protected !!
Scroll to Top
%d bloggers like this: