ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು ಮಹತ್ವದ ಮಾಹಿತಿ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ರೈತರು ಯಾವುದೇ ಆತಂಕ ಪಡುವುದು ಬೇಡ. ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಅಡಕೆ ಧಾರಣೆ ಸಂಬಂಧ ರೈತರಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದು ಸಚಿವರು ವಿನಂತಿಸಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ 25 ರೂ ರಷ್ಟಿದ್ದು, ಸುಮಾರು ಆರು ವರ್ಷಗಳ ಹಿಂದೆ ನಿಗದಿ ಪಡಿಸಲಾಗಿದೆ. ಹಾಗೂ ಪುನಃ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದಿದ್ದಾರೆ.

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿತ್ತು. ವಿದೇಶದಿಂದ ಆಮದಾಗುವ ಅಡಿಕೆ ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಉತ್ತಮವಾಗಿದೆ ಎಂದರು.

Leave A Reply

Your email address will not be published.