ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಅವರು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಪದವಿ ಪುರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಗಳಿಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಎಸ್ಎಸ್ಎಲ್‌ಸಿ ಫಲಿತಾಂಶದ ಮಾದರಿಯಲ್ಲೇ ಪಿಯುಸಿ ಫಲಿತಾಂಶವನ್ನೂ ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೂ ಕಳುಹಿಸಲಾಗುತ್ತದೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.88.02 ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶೇ.86.38 ಮೂಲಕ ಉಡುಪಿ ಎರಡನೇ ಸ್ಥಾನ ಪಡೆದರೆ ಶೇ.77.14 ಪಡೆಯುವ ಮೂಲಕ ವಿಜಯಪುರ ಮೂರನೇ ಸ್ಥಾನ ಪಡೆದುಕೊಂಡಿದೆ. ಇನ್ನು ಚಿತ್ರದುರ್ಗ ಶೇ. 49.31% ಮೂಲಕ ಕೊನೆಯ ಸ್ಥಾನ ಪಡೆದುಕೊಂಡಿದೆ.

ಫ್ರೆಶರ್ಸ್ ವಿದ್ಯಾರ್ಥಿಗಳಲ್ಲಿ 5,99,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,022,697 ತೇರ್ಗಡೆಯಾಗಿದ್ದಾರೆ. ಪುನರಾವರ್ತಿತ 61,838 ವಿದ್ಯಾರ್ಥಿಗಳಲ್ಲಿ 14,403 ಮಂದಿ ಪಾಸಾಗಿದ್ದಾರೆ. 21,931 ಖಾಸಗಿ ವಿದ್ಯಾರ್ಥಿಗಳಲ್ಲಿ 5,866 ಮಂದಿ ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ವಿಧಾನ:

  1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಭೇಟಿ ನೀಡಿ.
  2. ಓಪನ್ ಆದ ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ.
  3. ಆ ಓಪನ್ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  4. ಆಗ ನಿಮಗೆ ನಿಮ್ಮ ಫಲಿತಾಂಶ ಪ್ರಕಟಗೊಳ್ಳುತ್ತದೆ ಅದನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬಹುದು.
Leave A Reply

Your email address will not be published.