ಉಪ್ಪಿನಂಗಡಿ : ಪೆರ್ನೆಯಲ್ಲಿ ಅಪಘಾತ, ಉದ್ವಿಗ್ನ ಸ್ಥಿತಿ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಡಿಸಿ

Share the Article

ಶನಿವಾರ ಪೆರ್ನೆ ಬಳಿ ಹೆದ್ದಾರಿ ಗುತ್ತಿಗೆ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ.

ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಆಲಂಕಾರಿಗೆ ಹೋಗುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ನೆರವಾದರು.ಅಪಘಾತದ ಬಳಿಕ ಸ್ಥಳದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು, ಈ ವೇಳೆ ಸ್ಥಳಕ್ಕೆ ಆಲಂಕಾರು ಕಡೆಗೆ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆಗಮಿಸಿದ್ದು, ವಾಹನದಿಂದ ಇಳಿದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಅಪಘಾತದಲ್ಲಿ ಸಹ ಸವಾರೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದ. ವಿಚಾರ ತಿಳಿದು ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಜಿಲ್ಲಾಧಿಕಾರಿಯ ಮಾನವೀಯತೆ ಮತ್ತು ಕಾರ್ಯ ದಕ್ಷತೆಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಗಾಯಾಳು ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Leave A Reply