ಅತಿಥಿ ಶಿಕ್ಷಕರೇ ನಿಮಗೊಂದು ಭರ್ಜರಿ ಸಿಹಿ ಸುದ್ದಿ | 5000 ಅತಿಥಿ ಶಿಕ್ಷಕರ ನೇಮಕಕ್ಕೇ ಆದೇಶ ಹೊರಡಿಸಿದ ಸರಕಾರ!!!

Share the Article

ರಾಜ್ಯ ಸರಕಾರ ಅತಿಥಿ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗಷ್ಟೇ
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪೌಢಶಾಲೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುವ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ನೇಮಕ ಪ್ರಕ್ರಿಯೆಯ ಬಗ್ಗೆ ಸಿಹಿಸುದ್ದಿ ನೀಡಿದೆ.

ಅತಿಥಿ ಶಿಕ್ಷಕರಿಗೆ ಗೌರವಧನವನ್ನು 7,500 ರೂಪಾಯಿಯಿಂದ 10 ಸಾವಿರ ರೂಪಾಯಿಗೆ ಏರಿಕೆ ಮಾಡಿತ್ತು. ಈ ಆದೇಶ ಬೆನ್ನಲ್ಲೇ ಮತ್ತೊಂದೆಡೆ 5,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಆದೇಶ ಹೊರಡಿಸಿದೆ.

ಎರಡನೇ ಹಂತದಲ್ಲಿ ನಾಲ್ಕು ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಹಾಗೂ ಒಂದು ಸಾವಿರ ಪ್ರೌಢಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,000 ರೂ. ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಧನ 10,500 ರೂ. ಆಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave A Reply

Your email address will not be published.