ಪಿಯುಸಿ ರಿಸಲ್ಟ್ ಬೆನ್ನಲ್ಲೇ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ! ಪಾಸ್ ಆಗಿದ್ದರೂ ದುಡುಕಿನ ನಿರ್ಧಾರಕ್ಕೆ ಬಲಿಯಾಯಿತು ಅಮಾಯಕ ಜೀವ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಬೇಸರದಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಲ್ಲಿ, ಕೆಳಕಂಡ ಜಿಲ್ಲೆಯ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಬಾಗಲಕೋಟೆ:ಜಿಲ್ಲೆಯ ಬಿಳಗಿ ತಾಲೂಕಿನ ಯಡಹಳ್ಳಿಯ ಪೂಜಾ ರಾಚಪ್ಪ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಉತ್ಸಾಹದಿಂದ ಫಲಿತಾಂಶ ಪರೀಕ್ಷಿಸಿದಾಗ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಂಡ್ಯ ಜಿಲ್ಲೆಯಲ್ಲೂ ಓರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಮೃತಳನ್ನು ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಎಂ.ಜೆ ಸ್ಪಂದನ ಎಂದು ಗುರುತಿಸಲಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ನಳಾಗಿದ್ದ ಈಕೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದು ಮುಂದುವರಿಸಿದ್ದಳು. ಆದರೆ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ಕಾರಣದಿಂದ ಮನನೊಂದು ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಗದಗ ಜಿಲ್ಲೆಯ ಓರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು, ಮೃತಳನ್ನು ಪವಿತ್ರ ಪ್ರಭುಗೌಡ ಲಿಂಗಧಾಳ ಎಂದು ಗುರುತಿಸಲಾಗಿದ್ದು, ಈಕೆ ನಗರದ ಕಾಲೇಜೊಂದರ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು. ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಫೇಲ್ ಆದೆನೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಡಿಕೇರಿಯಲ್ಲೂ ಓರ್ವ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದು, ಮೃತಳನ್ನು ಕುಶಾಲನಗರ ಖಾಸಗಿ ಪದವಿ ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾ ಎಂದು ಗುರುತಿಸಲಾಗಿದೆ. ಫಲಿತಾಂಶದ ನಿರೀಕ್ಷೆಯಲ್ಲಿದ್ದ ಈಕೆ ಫೈಲ್ ಆಗುತ್ತೇನೆ ಎನ್ನುವ ಭಯದಿಂದ ಫಲಿತಾಂಶ ಬರುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದು, ವಿಪರ್ಯಾಸವೆಂದರೆ ಆಕೆ ಪಾಸ್ ಆಗಿದ್ದು, ದುಡುಕಿನ ನಿರ್ಧಾರ ಜೀವ ಬಲಿ ಪಡೆದಿದೆ.

Leave A Reply

Your email address will not be published.