ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸಹಿತ ಒಟ್ಟಾರೆ 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ 343 ಸಾಮಾನ್ಯ ಮತ್ತು 80 ಖಾಸಗಿ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ. ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ.

ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಜು.11ರಿಂದ ರಾಜ್ಯಾದ್ಯಂತ 5 ಜಿಲ್ಲೆಗಳ 28 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಆಗಸ್ಟ್‌ ಮೊದಲನೇ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲು ಮಂಡಳಿ ಗುರಿ ಹೊಂದಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್‌.ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ:

ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ

ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್, ಸಂಸ್ಕೃತ)

ಜೂನ್ 29-ದ್ವಿತೀಯ ಭಾಷೆ(ಇಂಗ್ಲಿಷ್-ಕನ್ನಡ)

ಜೂನ್ 30-ಸಮಾಜವಿಜ್ಞಾನ

ಜುಲೈ 1- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್ ಎಸ್, ಕ್ಯೂ, ಎಫ್ ಪರೀಕ್ಷಾ ವಿಷಯಗಳು (ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟ್ ಅಂಡ್ ವೆಲ್ ನೆಸ್)

ಜುಲೈ -2ಎಲಿಮೆಂಟ್‌ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

ಜುಲೈ-4 ಗಣಿತ, ಸಮಾಜಶಾಸ್ತ್ರ

ಕೋವಿಡ್ ನಿಯಂತ್ರಣ ಕ್ರಮಗಳು:

*ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು
*ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು
*ದೈಹಿಕ ಅಂತರ ಕಾಪಾಡುವುದು
*ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. *ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡುವುದು.
*ಸೂಚನಾ ಫಲಕದ ಮುಂದೆ ವಿದ್ಯಾರ್ಥಿಗಳು ಗುಂಪು ಗೂಡದಂತೆ ತಡೆಯುವುದು
*ವಿದ್ಯಾರ್ಥಿ ತನ್ನದೇ ಆದಂತ ನೀರಿನ ಬಾಟಲಿ ತರುವುದು
*ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು
*ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು.
*ಪರೀಕ್ಷಾ ಕೇಂದ್ರ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು
*ಪರೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.

Leave A Reply

Your email address will not be published.