ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಆರಂಬೋಡಿ ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯು ಸಂಘದ ಕಚೇರಿಯಲ್ಲಿ ನಡೆಯಿತು.
ಹಿರಿಯರಾದ ಪಾಂಡುರಂಗ ಮಾಸ್ಟರ್ ಭಾಗವಹಿಸಿ ಯೋಗದ ಮಹತ್ವವನ್ನು ತಿಳಿಸಿದರು, ಮತ್ತು ಯೋಗ ಅಭ್ಯಾಸವನ್ನು ನಡೆಸಿದರು.
ಈ ಸಂದರ್ಭದಲ್ಲಿ ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಪ್ರಭಾಕರ್. ಎಚ್. ಮತ್ತು ನಿರ್ದೇಶಕರು, ಸದಸ್ಯರು ಭಾಗವಹಿಸಿದರು. ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿ, ಧನ್ಯವಾದ ನೀಡಿದರು.