ಭಾರತೀಯ ನೌಕಾಪಡೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-338, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 8

ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವವರಿಗೆ ಸುವರ್ಣಾವಕಾಶವಿದ್ದು, ಮುಂಬೈನ ನೇವಲ್ ಡಾಕ್‌ಯಾರ್ಡ್ ಅಡಿಯಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರಗಳು:


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಒಟ್ಟು ಹುದ್ದೆಗಳ ಸಂಖ್ಯೆ – 338

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಅಲ್ಲದೆ, ಸಂಬಂಧಿತ ವಿಷಯದಲ್ಲಿ 65% ಅಂಕಗಳೊಂದಿಗೆ ಐಟಿಐ ಪಾಸ್ ಆಗಿರಬೇಕು.

ವಯೋಮಿತಿ:
ಆಗಸ್ಟ್ 1, 2001 ರಿಂದ ಅಕ್ಟೋಬರ್ 31, 2008 ರ ನಡುವೆ ಜನಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 8, 2022

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ indiannavy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Leave a Reply

error: Content is protected !!
Scroll to Top
%d bloggers like this: