ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವರಿಗೆ ಬಿಗ್ ಶಾಕ್ ನೀಡಿದ ಸರ್ಕಾರ!

ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದ ಯುವಕರಿಗೆ ಸರ್ಕಾರ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸಿದ ಒಬ್ಬೊಬ್ಬರನ್ನೇ ಗುರುತಿಸಿ ಬಂಧಿಸಲು ಹಾಗೂ ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲು ಮುಂದಾಗಿದೆ.

ಜೂನ್ 17 ರಂದು ಪ್ರತಿಭಟನೆಯಲ್ಲಿ 56 ಬಸ್‌ಗಳಿಗೆ ಹಾನಿ, 12.97 ಲಕ್ಷ ರೂಪಾಯಿ ನಷ್ಟ ಸಂಭವಿಸಿದ್ದು, ಈ ಘಟನೆಯ ಸಂಬಂಧ 27 ಜನರನ್ನು ಬಂಧಿಸಲಾಗಿದೆ.

ಪ್ರತಿಭಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಉಂಟಾದ ಹಾನಿಯ ನಷ್ಟವನ್ನು ಅವರಿಂದಲೇ ವಸೂಲಿ ಮಾಡಲಾಗುತ್ತಿದೆ. ಪ್ರತಿಭಟನೆಗಳಲ್ಲಿ ಗ್ರಾಮೀಣ ಜನರು ವಾರಣಾಸಿಯ ಸರ್ಕಾರಿ ಸಿಬ್ಬಂದಿ, ರಹಸ್ಯ ವ್ಯಕ್ತಿಗಳು ಮತ್ತು ಇತರ ಜಿಲ್ಲೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೌಶಲ್ ರಾಜ್ ಶರ್ಮಾ ಹೇಳಿದ್ದಾರೆ.

Leave A Reply

Your email address will not be published.