ಎಲ್ಲಾ ಮದರಸಗಳಲ್ಲೂ ಯೋಗ ದಿನ ಆಚರಣೆ ಕಡ್ಡಾಯ !!

ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಮದರಸಾ ಮಂಡಳಿಯು ರಾಜ್ಯದಲ್ಲಿ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಮದರಸಾಗಳಲ್ಲಿ ಕಡ್ಡಾಯವಾಗಿ ಯೋಗ ನಡೆಸಬೇಕು ಆದೇಶ ಪ್ರಕಟಿಸಿ, ಅದನ್ನು ಕಾರ್ಯರೂಪಕ್ಕೆ ತಂದಿದೆ.

ಈ ಆದೇಶವನ್ನು ಸೋಮವಾರ ಹೊರಡಿಸಲಾಗಿತ್ತು. ಆದೇಶದ ಪ್ರಕಾರ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯೋಗದ ಜ್ಞಾನವನ್ನು ನೀಡಲು ಜೂನ್ 21 ರಂದು ರಾಜ್ಯದ ಎಲ್ಲ ಮದರಸಾಗಳಲ್ಲಿ ಯೋಗ ಆಚರಿಸಬೇಕು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲು ಅಗತ್ಯವಿರುವ ವ್ಯವಸ್ಥೆಗಳನ್ನು ನೋಡಿ ಸಹಕರಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಯೋಗ ದಿನವನ್ನು ಗ್ರಾಮ ಪಂಚಾಯತ್‍ಗಳಿಂದ ಹಿಡಿದು ಜಿಲ್ಲಾ ಕೇಂದ್ರಗಳವರೆಗೆ ಎಲ್ಲ ಹಂತಗಳಲ್ಲಿ ಆಚರಿಸಲು ವ್ಯವಸ್ಥೆ ಮಾಡಲು ಯುಪಿ ಸರ್ಕಾರವು ಆಡಳಿತಕ್ಕೆ ಆದೇಶ ನೀಡಿತ್ತು.

ಯೋಗದ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ‘ಅಂತರರಾಷ್ಟ್ರೀಯ ಯೋಗ ದಿನ’ವನ್ನು ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 2014 ರಲ್ಲಿ, ವಿಶ್ವಸಂಸ್ಥೆಯ 69ನೇ ಅಧಿವೇಶನದಲ್ಲಿ ಯೋಗ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಡಿಸಿದರು. ನಂತರ 2014ರ ಡಿಸೆಂಬರ್ 11 ರಂದು, ಯುಎಸ್‍ಜಿಎ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಘೋಷಿಸಿತು. ಈ ವರ್ಷದ ಅಂತರಾಷ್ಟ್ರೀಯ ಯೋಗ ದಿನದ ಧ್ಯೇಯವಾಕ್ಯ ‘ಯೋಗ ಫಾರ್ ಹ್ಯುಮಾನಿಟಿ’.

Leave A Reply