ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ, ಬಿಇ ಇಂಜಿನಿಯರಿಂಗ್ ಕಾಲೇಜು ವ್ಯಾಂಸಗದ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗುತ್ತಿದೆ. ಈ ಬಗ್ಗೆ ಇಂಜಿನಿಯರಿಂಗ್ ಕಾಲೇಜುಗಳ ಜೊತೆಗೆ ಚರ್ಚಿಸಲಾಗಿದ್ದು, ಇದರ ಹೊರತಾಗಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

ಈವರೆಗೆ ಸರ್ಕಾರಿ ಸೀಟುಗಳಿಗೆ ಮಾತ್ರವೇ ಸಿಇಟಿ ಪರೀಕ್ಷೆ ನಡೆಸಲಾಗುತ್ತಿತ್ತು. ಖಾಸಗಿ ಸೀಟುಗಳ ಭರ್ತಿಗೆ ಕಾಮೆಡ್-ಕೆ ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ಎರಡನ್ನು ಒಟ್ಟಿಗೆ ನಡೆಸಲು ಸಮ್ಮತಿ ನೀಡಲಾಗಿದೆ. ಹೀಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ ಇರಲಿದ್ದು, ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದರು.

Leave A Reply