ಮತ್ತೊಬ್ಬ ಕೈ ನಾಯಕಿಯಿಂದ ಅಸಭ್ಯ ವರ್ತನೆ | ಪೊಲೀಸರಿಗೆ ಕ್ಯಾಕರಿಸಿ ಉಗಿಯುತ್ತಿರುವ ವೀಡಿಯೋ ವೈರಲ್ !!

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ದೇಶಾದ್ಯಂತ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ವೇಳೆ ಕೆಲ ಮುಖಂಡರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ವಾರ ಕಾಂಗ್ರೆಸ್ ಮಹಿಳಾ ನಾಯಕಿ ರೇಣುಕಾ ಚೌಧರಿ ಅವರು ಪಿಎಸ್‌ಐ ಅಧಿಕಾರಿಯ ಕೊರಳಪಟ್ಟಿ ಹಿಡಿದು ಎಳೆದಾಡಿದ್ದರು. ಮಹಿಳಾ ಪೊಲೀಸರ ಮೇಲೂ ತಮ್ಮ ದರ್ಪ ಮೆರೆದಿದ್ದರು. ಅಂತೆಯೇ ನಿನ್ನೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಭದ್ರತೆಗೆ ನಿಯೋಜಿಸಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ಮೇಲೆ ಕ್ಯಾಕರಿಸಿ ಉಗುಳಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಡಿಸೋಜಾ ಪೊಲೀಸರ ಮೇಲೆ ಉಗುಳಿ ಎಲ್ಲರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಬ್ಯಾರಿಕೇಡ್ ತಳ್ಳಿ ಪೊಲೀಸರ ಮೇಲೆ ನೂಕಾಟ ತಳ್ಳಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಅವರನ್ನು ವಶಕ್ಕೆ ಪಡೆದ ಪೊಲೀಸರು ವಾಹನದೊಳಕ್ಕೆ ಕೂಡಿ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನೆಟ್ಟಾ ಡಿಸೋಜಾ ಮಹಿಳಾ ಪೊಲೀಸರ ಮೇಲೆಯೇ ಉಗುಳಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದರ ಜೊತೆಗೆ ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

Leave A Reply