ದ.ಕ.ಜಿಲ್ಲೆಯ ಜನತೆಗೆ ಭರ್ಜರಿ ಉದ್ಯೋಗವಕಾಶ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

Share the Article

ದಕ್ಷಿಣ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 78 ಸಹಾಯಕಿಯರ ಸೇರಿದಂತೆ 87 ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ :  ಜೂನ್ 22,2022
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಜುಲೈ 21,2022ರ ಸಂಜೆ 5:30ರೊಳಗೆ
ಆನ್‌ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ : ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್ಸೈಟ್ https://anganwadirecruit.kar.nic.in/ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 22,2022 ರಿಂದ ಜುಲೈ 21,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ನೋಟಿಫಿಕೇಶ್ ಗಾಗಿ ಈ ಕೆಳಗೆ ನೀಡಲಾಗಿದೆ.

Leave A Reply